ಹೈದರಾಬಾದ್: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರು ತಾಲೂಕುಗಳಲ್ಲಿನ ಐದು ಪಂಚಾಯತಿಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: ಆರು ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್ನಲ್ಲಿ ಈ ನೇಮಕಾತಿ ನಡೆಯಲಿದೆ.
ಯಲಹಂಕ – 1
ಬೆಂಗಳೂರು ಉತ್ತರ- 1
ಬೆಂಗಳೂರು ಪೂರ್ವ 1
ಯಲಹಂಕ – 1
ಬೆಂಗಳೂರು ದಕ್ಷಿಣ – 2
ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ: ಕನಿಷ್ಠ ವೇತನ 15,196.72 ರೂ ಮಾಸಿಕ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅದಕ್ಕೆ ಅಗತ್ಯ ಪ್ರಮಾಣಗಳನ್ನು ಲಗತ್ತಿಸಬೇಕು. ಅಭ್ಯರ್ಥಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಖುದ್ದು ಸಲ್ಲಿಕೆ ಮಾಡಬೆಕು. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.
ಈ ಹುದ್ದೆಗೆ ಜುಲೈ 25 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್ 13 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ zpbengaluruurban.karnataka.gov.in ಇಲ್ಲಿಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು 080-26716169 ಸಂಪರ್ಕಿಸಬಹುದು.