ಬೆಂಗಳೂರು: ಕೇಂದ್ರ ಸರ್ಕಾರದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ನಲ್ಲಿ ಖಾಲಿ ಮ್ಯಾನೇಜ್ಮೆಂಟ್ ಟ್ರೈನಿ (ತಾಂತ್ರಿಕ) ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 249 ಹುದ್ದೆಗಳ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: 249 ಹುದ್ದೆಗಳ ಹಂಚಿಕೆ ಈ ರೀತಿ ಇದೆ.
ಕೆಮಿಕಲ್- 10
ಸಿವಿಲ್ -12
ಕಂಪ್ಯೂಟರ್ – 9
ಎಲೆಕ್ಟ್ರಿಕಲ್ – 61
ಇನ್ಸುಮೆಂಟೆಷನ್ -11
ಮೆಕಾನಿಕಲ್ -69
ಮೆಟಲ್ಯೂರ್ಜಿ- 63
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿಯನ್ನು ಪೂರ್ಣಗೊಳಿಸಿರುಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅಧಿಸೂಚನೆ (ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್)
ಅರ್ಜಿ ಸಲ್ಲಿಕೆ ವಿವರ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ, ಒಬಿಸಿ, ಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಗೇಟ್ 2024 ಅಂಕ, ಗ್ರೂಪ್ ಡಿಸ್ಕಷನ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಜುಲೈ 5ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 25 ಆಗಿದೆ. ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sail.co.in ಇಲ್ಲಿಗೆ ಭೇಟಿ ನೀಡಿ.
ಬಿಎಸ್ ಎಫ್ ನಲ್ಲಿ ಹುದ್ದೆ; ಗಡಿ ಭದ್ರತಾ ಪಡೆಯಲ್ಲಿನ 1526 ಸಹಾಯಕ ಸಬ್ ಇನ್ಸ್ಪೆಕ್ಟರ್ (ಮಿನಿಸ್ಟ್ರಿಯಲ್) ಮತ್ತು ಹೆಡ್ ಕಾನ್ಸ್ಟೇಬಲ್ (ಕ್ಲರ್ಕ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 243 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ವಾರೆಂಟ್ ಆಫೀಸರ್, 1283 ಹೆಡ್ ಕಾನ್ಸ್ಟೇಬಲ್ ಮತ್ತು ಹವೀಲ್ದಾರ್ (ಕ್ಲರ್ಕ್) ಹುದ್ದೆಗಳ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್ ಹುದ್ದೆಗಳ ನೇಮಕಾತಿ ಹಿನ್ನೆಲೆ ಅಭ್ಯರ್ಥಿಗಳು ಟೈಪಿಂಗ್ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ.
ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜೂನ್ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rectt.bsf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.