ಮನೆ ಹವಮಾನ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

0

ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್​, ಕಲಬುರಗಿ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಪಣಂಬೂರು, ಮಾಣಿ, ಶಿರಾಲಿ, ಗೇರುಸೊಪ್ಪ, ಪುತ್ತೂರು, ಕುಂದಾಪುರ, ಮಂಕಿ, ಸಿದ್ದಾಪುರ, ಕೊಟ್ಟಿಗೆಹಾರ, ಭಾಗಮಂಡಲ, ಕೊಲ್ಲೂರು, ಹೊನ್ನಾವರ, ಕ್ಯಾಸಲ್​ರಾಕ್, ಮಂಗಳೂರು, ಕೋಟ, ಸುಳ್ಯ, ಮುಲ್ಕಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಆಗುಂಬೆ, ಜಯಪುರ, ಕಳಸ, ಶೃಂಗೇರಿ, ಕೊಪ್ಪ, ಕುಮಟಾ, ಸಕಲೇಶಪುರ, ಬನವಾಸಿ, ಗೋಕರ್ಣ, ಲೋಂಡಾ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ನಾಪೋಕ್ಲು, ಮೂರ್ನಾಡು, ಕಾರವಾರ, ಯಲ್ಲಾಪುರ, ಕೂಡಲಸಂಗಮ, ಮೂಡಿಗೆರೆ, ಆನವಟ್ಟಿ, ತ್ಯಾಗರ್ತಿ, ಎನ್​ಆರ್​ಪುರ, ಹಾಸನ, ಹಾರಂಗಿ, ತರೀಕೆರೆ, ತಿಪಟೂರು, ಶ್ರವಣಬೆಳಗೊಳ, ಕುಶಾಲನಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗುರುವಾರದಿಂದ ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.