ಮನೆ ರಾಷ್ಟ್ರೀಯ ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ

0

ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ.

Join Our Whatsapp Group

ನವೆಂಬರ್‌ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.‌

ಸೋಮವಾರ ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕ್ಯಾನ್ಸರ್‌ನ ಕೆಲವು ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕೌನ್ಸಿಲ್ ಸಹ ನಮ್ಕೀನ್ ಮೇಲಿನ ದರವನ್ನು ಶೇ.18 ರಿಂದ ಶೇ.12 ಕ್ಕೆ ಇಳಿಸಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.