ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮತ್ತೆ ರಜತ್ ಗೆ ಬಸವೇಶ್ವರ ನಗರ ಪೊಲೀಸರು ನೋಟಿಸ್ ನೀಡಿದ್ದಾರೆ.
ಬಸವೇಶ್ವರ ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ರಜತ್ ಗೆ ಸೂಚನೆ ನೀಡಿದ್ದಾರೆ. ರಜತ್ ಬಳಸಿದ ಒರಿಜಿನಲ್ ಮಚ್ಚು ಪತ್ತೆಯಾಗದ ಹಿನ್ನೆಲೆ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.
ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ನಂತರ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಕೋರ್ಟ್ ವಶಕ್ಕೆ ನೀಡಿದ್ದರು. ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ವಿನಯ್ ಗೌಡ ಹಾಗೂ ರಜತ್ ರಿಲೀಸ್ ಆಗಿ ಹೊರ ಬಂದಿದ್ದಾರೆ.
ಪ್ರಕರಣದ ಹಿನ್ನೆಲೆ
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ತಡೆ ಕಾಯ್ದೆಯಡಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ವಿಚಾರಣೆ ವೇಳೆ ರೀಲ್ಸ್ ನಲ್ಲಿ ಹಿಡಿದಿದ್ದು ಒರಿಜಿನಲ್ ಮಚ್ಚಲ್ಲ, ಫೈಬರ್ ಮಚ್ಚು ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು.