ಮಂಡ್ಯ: 2025ರ ದ್ವಿತೀಯ ಪಿಯುಸಿ ಪರೀಕ್ಷೆ-03 ಜೂನ್ 09 ರಿಂದ 20 ರವರೆಗೆ ನಡೆಯಲಿದ್ದು, ಪರೀಕ್ಷೆ- 02ರ ಫಲಿತಾಂಶ ಪೂರ್ಣಗೊಳ್ಳದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ-03ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳಲು ಮೇ28 ಅಂತಿಮ ದಿನಾಂಕವಾಗಿರುತ್ತದೆ
ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ಪದವಿ ಪೂರ್ವ ಕಾಲೇಜುಗಳನ್ನು ಸಂಪರ್ಕಿಸಬಹುದು ಅಥವಾ kscab.karnataka.gov.in ಇಲಾಖಾ ವೆಬ್ ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














