ಮನೆ ಕಾನೂನು ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

0

ಬೆಂಗಳೂರು(Bengaluru): ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ನಗರದ ಸೆಷನ್ಸ್ ಕೋರ್ಟ್  ವಜಾಗೊಳಿಸಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ಸ್ಟೀಫನ್‌, ಪುರುಷೋತ್ತಮ್‌ ಮತ್ತು ಅಜಯ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 71ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ಎಸ್‌. ಸಂಧ್ಯಾ ವಿಚಾರಣೆ ನಡೆಸಿ, ಮನವಿ ಪರಿಗಣಿಸಲು ನಿರಾಕರಿಸಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸಿದಂತಾಗುತ್ತದೆ. ಆರೋಪಿಗಳು 2021ರ ಜುಲೈ 5ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂಬ ಕಾರಣಕ್ಕೆ ಜಾಮೀನು ನೀಡಲಾಗದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಏನಿದು ಘಟನೆ ?: ಛಲವಾದಿಪಾಳ್ಯ ವಾರ್ಡ್‌ನ ಮಾಜಿ ಸದಸ್ಯೆ ಹಾಗೂ ಕದಿರೇಶ್‌ ಪತ್ನಿ ರೇಖಾ ಅವರನ್ನು 2021ರ ಜೂನ್ 24ರಂದು ಫ್ಲವರ್‌ ಗಾರ್ಡನ್‌ನಲ್ಲಿರುವ ಅವರ ಕಚೇರಿ ಬಳಿ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್‌ ಪೇಟೆ ಠಾಣೆ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಪುರುಷೋತ್ತಮ್, ಅಜಯ್, ಅರುಣ್ ಕುಮಾರ್, ಮಾಲಾ, ಸೆಲ್ವರಾಜ್ ಎಂಬುವರನ್ನು ಬಂಧಿಸಿದ್ದರು.

ಹಿಂದಿನ ಲೇಖನಇಂದಿನ ನಿಮ್ಮ ರಾಶಿ ಭವಿಷ್ಯ ಹೀಗಿದೆ
ಮುಂದಿನ ಲೇಖನಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ