ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿ ಒಟ್ಟು 81 ಮಂದಿಗೆ ಬಿಡುಗಡೆಯಾಗಿದ್ದಾರೆ. ಬಿಜೆಪಿ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿತ್ತು. ಬಳಿಕ ರಾಜ್ಯಪಾಲರು ಈಗ ಒಪ್ಪಿಗೆ ನೀಡಿದ್ದು, ಬಿಡುಗಡೆಗೆ ಸೂಚಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗಿದ್ದ ಮೈಸೂರು ಹಾಗೂ ವಿಜಯಪುರ ಜಿಲ್ಲೆಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.
ಜೈಲಿನ ಪ್ರವೇಶ ದ್ವಾರದ ಹೊರಭಾಗದಲ್ಲಿ ಕೈದಿಗಳ ಸಂಬಂಧಿಕರು, ಸ್ನೇಹಿತರು ಬಂದಿದ್ದು, ತಮ್ಮವರನ್ನು ಕಂಡ ಕೂಡಲೇ ತಬ್ಬಿಕೊಂಡು ಕಣ್ಣೀರು ಹಾಕಿದರು. ಇನ್ನು ಕೆಲವರು ತಾವೇ ಊರಿನತ್ತ ಹೆಜ್ಜೆ ಹಾಕಿದರು.