ಮನೆ ಸುದ್ದಿ ಜಾಲ ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ ಬಿಡುಗಡೆ

ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ ಬಿಡುಗಡೆ

0

ಬೆಂಗಳೂರು: ಹಾಲಿ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 3,267 ಅತಿಥಿ ಉಪನ್ಯಾಸಕರಿಗೆ 36.54 ಲಕ್ಷ ರೂ.ಗಳ ಗೌರವ ಸಂಭಾವನೆ ಬಿಡುಗಡೆ ಮಾಡಲಾಗಿದೆ   ಎಂದು ಪಿಯು ಇಲಾಖೆ ತಿಳಿಸಿದೆ.

ಅತಿಥಿ ಉಪನ್ಯಾಸಕರಿಗೆ ಮಾಸಿಕ 9 ಸಾವಿರ ರೂ.ಗಳಂತೆ 2021ರ ಆಗಸ್ಟ್‌ನಿಂದ ಫೆಬ್ರವರಿ 2022ರ ಅವಧಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ಉತ್ತರ, ಬಳ್ಳಾರಿ, ಚಿಕ್ಕೋಡಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸಹಿತ ಒಟ್ಟಾರೆ 8 ಶೈಕ್ಷಣಿಕ ಜಿಲ್ಲೆಗಳಲ್ಲಿ 58 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಕಾಲೇಜುಗಳಿಗೆ ಪಿಯು ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಹಿಂದಿನ ಲೇಖನದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಇಳಿಕೆ
ಮುಂದಿನ ಲೇಖನಹರ್ಷನ ಕುಟುಂಬಕ್ಕೆ  50 ಲಕ್ಷಕ್ಕೂ ಹೆಚ್ಚು ಆರ್ಥಿಕ ನೆರವು