ಮನೆ ರಾಜಕೀಯ ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸಂಸದ ಪ್ರತಾಪ್ ಸಿಂಹ

ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸಂಸದ ಪ್ರತಾಪ್ ಸಿಂಹ

0

ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು. ಸರಕಾರವನ್ನು ಪ್ರಶ್ನಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಜನರ ಜೀವ ಉಳಿಯಬೇಕಾದರೆ ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ ಎಂದು ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಪ್ರಚಾರ ರ್‍ಯಾಲಿ ನಡೆಯುತ್ತದೆ ತಾನೇ?  ಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು.

ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ ಜೀವನ, ಜೀವ ಎರಡು ಮುಖ್ಯ.ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಾ ವರ್ಗದ ಜನರಿಗೂ ಕರ್ಫ್ಯೂ, ಲಾಕ್ ಡೌನ್ ನಿಂದ ತೊಂದರೆ ಆಗಿದೆ ಎಂದರು.

ಹಿಂದಿನ ಲೇಖನಗಣರಾಜ್ಯೋತ್ಸವದಂದು ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್
ಮುಂದಿನ ಲೇಖನಮುಕ್ತ ವಿವಿ ಕುಲಪತಿ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು