ಮನೆ ರಾಜ್ಯ ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

0

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕನ್ನಡದ ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪದ್ಮಶ್ರೀ ಪುರಸ್ಕೃತ ಖ್ಯಾತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡರಿಗೆ ಬಿಜಿಎಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಳೆದ ಒಂದು ವರ್ಷದಿಂದ ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದ ಅವರಿಗೆ ಭಾನುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.