ಮನೆ ರಾಜ್ಯ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ: ಸಚಿವ...

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ: ಸಚಿವ ಶಿವರಾಜ ತಂಗಡಗಿ

0

ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ  ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ.

Join Our Whatsapp Group

ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ.

 ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.