ಮನೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

0

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಅವರ ಆಪ್ತೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ಸೋಮವಾರ ವಜಾಗೊಳಿಸಿತು.

Join Our Whatsapp Group


ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿ ಸೋಮವಾರ ಪ್ರಕಟಿಸುವುದಾಗಿ ಹೇಳಿತ್ತು.
ನ್ಯಾಯಾಧೀಶ ಜೈಶಂಕರ್ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದರು.


ಕೊಲೆ ಪ್ರಕರಣದ ಆರೋಪದ ಅಡಿ ಜೂನ್‌ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ದರ್ಶನ್‌ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಅವರ ಪರವಾಗಿ ಸೆ.21ರಂದು ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು.


ಈ ಪ್ರಕರಣದಲ್ಲಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದ್ದರು. ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್ ವಾದಿಸಿದ್ದರು.