ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ (ನ.21 ರಂದು) ಹೈಕೋರ್ಟ್‌ನಲ್ಲಿ ನಡೆದಿದೆ.
ದರ್ಶನ್ ಬೆನ್ನುನೋವಿಗೂ ಮೊದಲು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವಿಶ್ವಜಿತ್ ಶೆಟ್ಟಿ ಅವರಿರುವ ಏಕಸದಸ್ಯ ಪೀಠದಲ್ಲಿ ನಡೆದಿದೆ.
ಪೊಲೀಸರ ಪರ ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಂಡಿಸಿದ್ದಾರೆ.
6 ವಾರಗಳ ಕಾಲ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ. ಆದರೆ ಸರ್ಜರಿಯ ದಿನಾಂಕವನ್ನು ಇದುವರೆಗೆ ನಿಗದಿಪಡಿಸಿಲ್ಲವೆಂದು ಅವರು ಹೇಳಿದ್ದಾರೆ.
ಇದಲ್ಲದೆ ಹೆಚ್ಚುವರಿ ಆರೋಪ ಪಟ್ಟಿ ವಿಚಾರಣಾ ಕೋರ್ಟಿಗೆ ಸಲ್ಲಿಕೆ ಮಾಡಲಾಗಿದೆ. ದರ್ಶನ್ ಪರ ವಕೀಲರು ವೈದ್ಯಕೀಯ ವರದಿಯ ಪ್ರತಿ ಕೋರ್ಟ್ ಹಾಗೂ ಎಸ್ ಪಿಪಿಗೆ ಸಲ್ಲಿಸಿದ್ದಾರೆ.
ನ.26ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರು ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾದ ಮಾಡಿದ್ದ ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇದರಿಂದಾಗಿ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. 6 ವಾರಗಳ ಅವರಿಗೆ ವೈದ್ಯಕೀಯ ಜಾಮೀನು ನೀಡಿದೆ.
ಮಧ್ಯಂತರ ಜಾಮೀನಿನಲ್ಲಿರುವ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ವಾರ ಕಳೆದರೂ ಅವರಿಗೆ ಸರ್ಜರಿ ಮಾಡಿಲ್ಲ. ಈ ಕಾರಣದಿಂದ ಪೊಲೀಸರು ದರ್ಶನ್ ಅವರ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.