ಬೆಂಗಳೂರು(Bengaluru): ಪ್ರತಿ ವರ್ಷ ಜ.26ರಂದು ದೆಹಲಿಯ ರಾಜಪಥ್ ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್’ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ ಈ ಕುರಿತು ಮಾಹಿತಿ ನೀಡಿದ್ದು, ಬೇರೆ ರಾಜ್ಯಗಳಿಗೆ ಅವಕಾಶ ನೀಡೋ ಕಾರಣಕ್ಕೆ ಕರ್ನಾಟಕದ ಮಾದರಿ ಸ್ಥಬ್ದ ಚಿತ್ರಕ್ಕೆ ಕೇಂದ್ರ ಅನುಮತಿ ನಿರಾಕರಣೆ ಮಾಡಿದೆ ಎಂದಿದ್ದಾರೆ.
ಅಂತಿಮ ಹಂತದಲ್ಲಿ ರಾಜ್ಯಗಳ ಆಯ್ಕೆಯಲ್ಲಿ ಅನುಮತಿ ನಿರಾಕರಿಸಲಾಗಿದೆ. ಕರ್ನಾಟಕ ಕಳೆದ ಬಾರಿ ಎರಡನೇ ಸ್ಥಾನ ಪ್ರಶಸ್ತಿ ಪಡೆದಿತ್ತು. ಈ ಬಾರಿ ಮಹಿಳಾ ಸಬಲೀಕರಣ ಥೀಮ್ ರೆಡಿ ಮಾಡಿದ್ದೆವು. ಆದ್ರೆ ಕೇಂದ್ರದಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.
ತಮಿಳುನಾಡು, ಕೇರಳ ಸೇರಿ ಈ ಬಾರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮ ಹಂತದಲ್ಲಿ ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ. ಈ ಬಾರಿ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮರ ಸ್ತಬ್ಧ ಚಿತ್ರ ಫೈನಲ್ ಆಗಿತ್ತು. ಒಟ್ಟು ನಾಲ್ಕು ವಿಷಯಗಳನ್ನು ರಾಜ್ಯ ಕೊಟ್ಟಿತ್ತು. ನಾರಿ ಶಕ್ತಿ ಸ್ತಬ್ಧಚಿತ್ರ ಕಲ್ಪನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಂತಿಮ ಹಂತದ ಸಭೆಯಲ್ಲಿ ಕರ್ನಾಟಕ ಸ್ತಬ್ಧಚಿತ್ರ ರಿಜೆಕ್ಟ್ ಆಗಿದೆ.