ಮನೆ ಸುದ್ದಿ ಜಾಲ ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಸಂಶೋಧನೆ ಸಹಕಾರಿ: ಪ್ರೊ.ಜಿ.ಹೇಮಂತ್ ಕುಮಾರ್

ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಸಂಶೋಧನೆ ಸಹಕಾರಿ: ಪ್ರೊ.ಜಿ.ಹೇಮಂತ್ ಕುಮಾರ್

0

ಮೈಸೂರು(Mysuru):  ಭಾರತದ ವಿವಿಗಳಲ್ಲಿ ಜೀವಶಾಸ ಬಗ್ಗೆ ಹೆಚ್ಚಿನ ಸಂಶೋಧನೆಗಳು ಆಗುತ್ತಿದ್ದು, ಇದು ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ಅಧ್ಯಯನ ವಿಭಾಗ ವತಿಯಿಂದ  ’ಸುಧಾರಿತ ಡ್ರೊಸೊಫಿಲಾ ಜೆನೆಟಿಕ್ಸ್ ’ ಕುರಿತು ನಡೆದ  ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಮಟ್ಟದಲ್ಲಿ ಕಲಿಸಲು ಪಠ್ಯಕ್ರಮದ ಒಂದು ಭಾಗವಾಗಿ ಡ್ರೊಸೊಫಿಲಾದ ಜೀವಶಾಸ್ತ್ರ ಹಾಗೂ ಮೂಲ ತಳಿಶಾಸವನ್ನು ಅಧ್ಯಯನ ಮಾಡಲಾಗುತ್ತಿದೆ. ಇತ್ತೀಚಿನ ದಿನದಲ್ಲಿ ನೊಣದ ಮೇಲೆ ನಡೆದ ಸಂಶೋಧನೆ ಶ್ಲಾಘನೀಯವಾಗಿದೆ. ಶಿಕ್ಷಕರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ಯುವ ಪೀಳಿಗೆಗೆ ತರಬೇತಿ ನೀಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಜೆನೆಟಿಕ್ಸ್‌ನಲ್ಲಿ ಹೆಚ್ಚಿನ ಸಂಶೋಧನೆಯಾದರೆ ಸಮಾಜಕ್ಕೆ ಸಾಕಷ್ಟು ಪ್ರಯೋಜನ ಲಭಿಸುತ್ತದೆ ಎಂದರು.

ಹಿಂದಿನ ಲೇಖನಫರ್ನಿಚರ್ ಮಳಿಗೆಯಲ್ಲಿ ಅಗ್ನಿ ಅವಘಡ
ಮುಂದಿನ ಲೇಖನದೇವಮಾನವ ವೀರೇಂದ್ರ ದೇವ್ ದೀಕ್ಷಿತ್ ಆಶ್ರಮ ಪ್ರಕರಣ: ನ್ಯಾಯಾಲಯವನ್ನು ಮೋಸಗೊಳಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್