ಮನೆ ರಾಜಕೀಯ ಹಿಂದುಳಿದ ವರ್ಗಗಳಿಗೆ ಮೀಸಲಾತಿ: ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಮಲ್ಲಿಕಾರ್ಜುನ ಖರ್ಗೆ

ಹಿಂದುಳಿದ ವರ್ಗಗಳಿಗೆ ಮೀಸಲಾತಿ: ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಮಲ್ಲಿಕಾರ್ಜುನ ಖರ್ಗೆ

0

ಬೆಂಗಳೂರು(Bengaluru): ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10 ಮೀಸಲಾತಿ‌ ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನಬದ್ಧ ಎಂಬ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಿಂದ ಸೋಮವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಖರ್ಗೆ, ಮೀಸಲಾತಿ ಪ್ರಸ್ತಾವನೆಯನ್ನು ಲೋಕಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದ್ದೆವು. ಅದನ್ನು ಸುಪ್ರೀಂ ಕೋರ್ಟ್ ಎತ್ತಿ‌ ಹಿಡಿದಿದೆ. ಸುಪ್ರೀಂ ಕೋರ್ಟ್ ತೀರ್ಪುನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಈಗಾಗಲೇ ರಾಜ್ಯದ ಪಕ್ಷದ ನಾಯಕರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಟ ಮಾಡುವಂತೆ ನಾನು ಎಲ್ಲ ನಾಯಕರಿಗೂ ಸ್ಪಷ್ಟವಾಗಿ ಹೇಳಿದ್ದೇನೆ. ಪಕ್ಷಕ್ಕೆ ಎಲ್ಲರೂ ಕೆಲಸ ಮಾಡುತ್ತೇವೆಂದು ಹೇಳಿದ್ದಾರೆ‌. ಎಲ್ಲರೂ ಸಹಕಾರ ನೀಡುತ್ತಾರೆಂಬ ವಿಶ್ವಾಸವಿದೆ ಎಂದರು.

ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮಂಗಳವಾರದಿಂದ ಖರ್ಗೆ ಭಾಗವಹಿಸಲಿದ್ದಾರೆ.