ಮನೆ ರಾಜಕೀಯ ಪಕ್ಷದ ಸಮಸ್ಯೆಯೇಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಡಿಕೆಶಿಗೆ ಆರ್ ಅಶೋಕ್ ಟಾಂಗ್

ಪಕ್ಷದ ಸಮಸ್ಯೆಯೇಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಡಿಕೆಶಿಗೆ ಆರ್ ಅಶೋಕ್ ಟಾಂಗ್

0

ಬೆಂಗಳೂರು: ನೀರಿನ ಬಿಕ್ಕಟ್ಟು ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯದ ಜನತೆ ಎದುರಿಸುತ್ತಿರುವಾಗ, ಅವುಗಳಿಗಿಂತಲೂ ಪಕ್ಷದ ಸಮಸ್ಯೆಯೇ ನಿಮಗೆ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ. ಪೂರ್ಣಾವಧಿಗೆ ಪಕ್ಷದ ಅಧ್ಯಕ್ಷರಾಗಿಯೇ ಮುಂದುವರಿಯಿರಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.

ಹಿಮಾಚಲ ಪ್ರದೇಶ ಕಾಂಗ್ರೆಸ್​​ನಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್  ಅಲ್ಲಿಗೆ ತೆರಳುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಆರ್ ಅಶೋಕ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ತೆಲಂಗಾಣ ಚುನಾವಣೆಗಾಗಿ ರಾಜ್ಯವನ್ನು ಮೈಮರೆತು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿ ರಾಜ್ಯದ ಜಲಾಶಯಗಳನ್ನ ಬರಿದು ಮಾಡಿದ್ದಾಯ್ತು. ಈಗ ಹಿಮಾಚಲ ಪ್ರದೇಶದ ರಾಜಕೀಯ ಉಸಾಬರಿಗಾಗಿ ರಾಜ್ಯ ಬಿಟ್ಟು ಹೋದರೆ ನೀರಿಲ್ಲದೆ ಪರದಾಡುತ್ತಿರುವ ಬೆಂಗಳೂರಿನ ಜನರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಯಾರು ಡಿಸಿಎಂ ಡಿಕೆ ಶಿವಕುಮಾರ್ ಅವರೇ ಎಂದು ಪ್ರಶ್ನಿಸಿದ್ದಾರೆ.

ತಮ್ಮ ‘ಆತ್ಮಸಾಕ್ಷಿ’ಗೆ ಕನ್ನಡಿಗರ ಹಿತಕ್ಕಿಂತ ಪಕ್ಷದ ಹಿತವೇ ಮುಖ್ಯವಾದರೆ ರಾಜೀನಾಮೆ ಕೊಟ್ಟು ಪೂರ್ಣಾವಧಿ ಅಧ್ಯಕ್ಷರಾಗಿ ಪಕ್ಷದ ಕೆಲಸ ಮಾಡಿ. ಅದು ಬಿಟ್ಟು ಕೇವಲ ಅಧಿಕಾರಕ್ಕಾಗಿ ಬೆಂಗಳೂರು ಅಭಿವೃದ್ಧಿ, ನೀರಾವರಿ ಅಂತಹ ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡು ಕರ್ತವ್ಯ ವಂಚನೆ ಮಾಡಿ ಪದೇ ಪದೇ ಕನ್ನಡಿಗರಿಗೆ ದ್ರೋಹ ಮಾಡಬೇಡಿ ಎಂದು ಅಶೋಕ್ ಆಗ್ರಹಿಸಿದ್ದಾರೆ.

ಮಂಗಳವಾರ ರಾಜ್ಯಸಭೆ ಚುನಾವಣೆ ವೇಳೆ ಹಿಮಾಚಲ ಪ್ರದೇಶದಲ್ಲಿ ಆರ್ ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಪರ ಮತ ಚಲಾಯಿಸಿದ್ದರು. ಇದು ಹಿಮಾಚಲ ಪ್ರದೇಶ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟಿಗೆ ಕಾರಣವಾಗಿದೆ. ಸಮಸ್ಯೆ ಬಗ್ಗೆ ಹರಿಸುವ ಜವಾಬ್ದಾರಿಯನ್ನು ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿಕೆ ಶಿವಕುಮಾರ್ ​ಗೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ವಹಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಶಿಮ್ಲಾಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಹಿಂದಿನ ಲೇಖನಟ್ರಕ್ – ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಮುಂದಿನ ಲೇಖನಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ