ಮನೆ ರಾಜಕೀಯ ಶ್ರೀಲಂಕಾ ಸೆಂಟ್ರಲ್​ ಬ್ಯಾಂಕ್​ ಗವರ್ನರ್​ ರಾಜೀನಾಮೆ

ಶ್ರೀಲಂಕಾ ಸೆಂಟ್ರಲ್​ ಬ್ಯಾಂಕ್​ ಗವರ್ನರ್​ ರಾಜೀನಾಮೆ

0

ಶ್ರೀಲಂಕಾ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸರ್ಕಾರದ ಎಲ್ಲಾ ಸಚಿವರು ಈಗಾಗಲೇ ರಾಜೀನಾಮೆ ನೀಡಿದ್ದು, ಈಗ ಸೆಂಟ್ರಲ್ ಬ್ಯಾಂಕ್ ಗವರ್ನರ್ ಹುದ್ದೆಗೆ ಅಜಿತ್ ನಿವಾರ್ಡ್ ಕ್ಯಾಬ್ರಾಲ್ ರಾಜೀನಾಮೆ ಸಲ್ಲಿಸಿದ್ದಾರೆ

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಭಾನುವಾರ ರಾತ್ರಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಈ ಕುರಿತು ನಮಲ್​ ರಾಜಪಕ್ಸ ಖುದ್ದು ಟ್ವೀಟ್‌ ಮಾಡಿದ್ದರು.