ಬೆಂಗಳೂರು:ಏ 15. ಕ್ಷೇತ್ರದ ಜನತೆಯ ಕುಂದು ಕೊರತೆಗಳನ್ನು ಬಗೆಹರಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡುತ್ತಾ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ನಲ್ಲಿ ಕುಂದು ಕೊರತೆಗಳ ಸಭೆ ನಡೆಸಿ ಅವರು ಮಾತನಾಡಿದರು.
ಮೂರು ಬಾರಿ ಶಾಸಕನಾಗಿ ಆಯ್ಕೆ ಮಾಡುವುದಕ್ಕೆ ನೀವು ಅವಕಾಶ ಮಾಡಿಕೊಟ್ಟು, ನಂದಿನಿ ಬಡಾವಣೆಯಲ್ಲಿ ಹೆಚ್ಚು ಮತವನ್ನು ನೀಡಿದ್ದಾರೆ.
ಇಲ್ಲಿನ ರಸ್ತೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಕಳೆದ ಹತ್ತು ವರ್ಷದಿಂದ ಯಾವ ರೀತಿ ಇದ್ದಿದ್ದನ್ನು ಕ್ಷೇತ್ರದ ಜನರು ಗಮನಿಸಬೇಕು ಎಂದರು.
ಸಾರ್ವಜನಿಕರಿಗೆ ಅನುಕೂಲವಾಗುವಂತಹ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಲಾಗಿದೆ. ನನ್ನ ಕ್ಷೇತ್ರದಲ್ಲಿ ಆಸ್ಪತ್ರೆಗಳು, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ಹೀಗೆ ಹಲವಾರು ಅಭಿವೃದ್ಧಿ ಕೆಲಸ ಮಾಡಲಾಗಿದೆ ಎಂದರು.
ಕ್ಷೇತ್ರದ ಜನರಿಗೆ ಅನುಕೂಲವಾಗಬೇಕು. ಅವರ ಆರೋಗ್ಯ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಮೂಲ ಉದ್ದೇಶದಿಂದ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಮ್ಮ ಕ್ಲಿನಿಕ್ ಅನ್ನು ಪ್ರಾರಂಭಿಸಿ ಕಾರ್ಯರೂಪಕ್ಕೆ ತರಲಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸಲು ಮುಂದಾಗಿ ಎಂದರು.
ಸಾರ್ವಜನಿಕರಿಗೆ ಉಚಿತವಾಗಿ ಥೈರಾಯಿಡ್, ಬಿಪಿ, ಶುಗರ್ ಪರೀಕ್ಷೆಯನ್ನು ಮಾಡಿ ಅನುಕೂಲವಾಗುವ ನಿಟ್ಟಿನಲ್ಲಿ ಅವರಿಗೆ ಮಾತ್ರೆಗಳನ್ನು ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಭಾರತಿ, ಲೋಕೇಶ್, ಸುಧಾಕರ್ ಸೇರಿದಂತೆ ಬಿಜೆಪಿಯ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.