ಮನೆ ರಾಜ್ಯ ಮಲೆ ಮಹದೇಶ್ವರ ಬೆಟ್ಟಕ್ಕೆ ಭಾರೀ ವಾಹನಗಳ ನಿರ್ಬಂಧ

ಮಲೆ ಮಹದೇಶ್ವರ ಬೆಟ್ಟಕ್ಕೆ ಭಾರೀ ವಾಹನಗಳ ನಿರ್ಬಂಧ

0

ಚಾಮರಾಜನಗರ(Chamarajanagara): ಜಿಲ್ಲೆಯ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತಿರಳುತ್ತಿದ್ದ ಬಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ದಿಂಬಂ ಘಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನೀಷೇಧ ಇರುವುದರಿಂದ ತಮಿಳುನಾಡಿಗೆ ಸರಕು ಸಾಗಿಸುವ ಲಾರಿಗಳೆಲ್ಲಾ ಮಲೆಮಹದೇಶ್ವರ ಬೆಟ್ಟದ ಮೂಲಕ ನೆರೆ ರಾಜ್ಯಕ್ಕೆ ತಲುಪುತ್ತಿದ್ದವು. ಆದರೆ, ಬೆಟ್ಟದ ರಸ್ತೆ ಕಿರಿದು ಹಾಗೂ ಕಡಿದಾದ ಹಿನ್ನೆಲೆಯಲ್ಲಿ ಆಗಾಗ್ಗೆ ಲಾರಿಗಳು ಪಲ್ಟಿಯಾಗಿ ಗಂಟೆಗಟ್ಟಲೇ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದು, 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಾತ್ರ ನಿರ್ಬಂಧಿಸಲಾಗಿದೆ.

ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಆಂಬ್ಯುಲೆನ್ಸ್, ಸರ್ಕಾರಿ, ಖಾಸಗಿ ಬಸ್‍ಗಳು, ಸರ್ಕಾರಿ ವಾಹನಗಳು 24 ತಾಸು ಕೂಡ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.