ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
6 ದಿನ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 22ರಿಂದ 27ರವರೆಗೆ ಪ್ರವಾಸಿ ತಾಣಗಳಿಗೆ ನಿರ್ಬಂಧ ಇರಲಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.