ಮನೆ ರಾಜಕೀಯ ಚುನಾವಣಾ ರಾಜಕೀಯದಿಂದ ನಿವೃತ್ತರಾದ ಕೆ.ಎಸ್‌. ಈಶ್ವರಪ್ಪ

ಚುನಾವಣಾ ರಾಜಕೀಯದಿಂದ ನಿವೃತ್ತರಾದ ಕೆ.ಎಸ್‌. ಈಶ್ವರಪ್ಪ

0

ಬೆಂಗಳೂರು: ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ನಿವೃತ್ತರಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

Join Our Whatsapp Group

ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಿಂದಿನ ಲೇಖನನಕಲಿ ವಿಲ್ ದೃಢೀಕರಿಸಿದ ಆರೋಪ: ನೋಟರಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಮುಂದಿನ ಲೇಖನನಿವೇಶನ ಒತ್ತುವರಿ ಪ್ರಕರಣ: ವಿವಾದಕ್ಕೆ ಆಸ್ಪದ ನೀಡಿದ ಮೈಸೂರು ವಿವಿ ಕುಲಪತಿ ನೇಮಕ