ಮನೆ ಕಾನೂನು ನೂತನ ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ

ನೂತನ ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ

0

ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Join Our Whatsapp Group

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್‌ 3(1)ರ ಅಡಿ ದೊರೆತಿರುವ ಅಧಿಕಾರ ಬಳಸಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದಾಗಿ ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ, ವಿಧಾನಸಭೆ ಸ್ಪೀಕರ್‌, ಪರಿಷತ್‌ ಸಭಾಪತಿ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.