ಮನೆ ರಾಜ್ಯ ಏ.1ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಜಾರಿ : ಸಚಿವ ಕೆ.ವೆಂಕಟೇಶ್

ಏ.1ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಜಾರಿ : ಸಚಿವ ಕೆ.ವೆಂಕಟೇಶ್

0

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೇ, ಪಶು ಸಂಗೋಪನ ಇಲಾಖೆ ಸಚಿವ ಕೆ ವೆಂಕಟೇಶ್ ಸುದ್ದಿಗೋಷ್ಠಿ ನಡೆಸಿ, ನಂದಿನ ಹಾಲಿನ ಪರಿಷ್ಕೃತ ದರ ಏಪ್ರಿಲ್ 1 ರಿಂದ ಅನ್ವಯ ಆಗಲಿದೆ ಎಂದು ವಿಕಾಸಸೌಧದಲ್ಲಿ ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಅವರು ಸ್ಪಷ್ಟನೆ ನೀಡಿದರು.

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಪಶು ಸಂಗೋಪನ ಇಲಾಖೆ ಸಚಿವ ಕೆ ವೆಂಕಟೇಶ್ ಅವರು ಏಪ್ರಿಲ್ 1ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ ಆಗಲಿದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಿ ಕ್ಯಾಬಿನೆಟ್ ನಲ್ಲಿ ಈ ಕುರಿತು ತೀರ್ಮಾನ ಆಗಿದೆ. 4 ರೂಪಾಯಿ ರೈತರಿಗೆ ಕೊಡಬೇಕು ಅಂತಾನು ಕೂಡ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಹಾಲಿನ ದರ ಹೆಚ್ಚಳ ಮಾಡಿ 4 ರೂಪಾಯಿ ರೈತರಿಗೆ ಕೊಡಬೇಕು ಎಂದು ಸಂಪುಟದಲ್ಲಿ ನಿರ್ಧರಿಸಲಾಗಿದೆ. ಹಾಗಾಗಿ ಏಪ್ರಿಲ್ 1 ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯವಾಗಲಿದೆ. ಈಗಾಗಲೇ ಸರ್ಕಾರ ಕೆಎಸ್ಆರ್ಟಿಸಿ ಹಾಗೂ ಮೆಟ್ರೋ ಟಿಕೆಟ್ ಪ್ರಯಾಣ ದರ ಹೆಚ್ಚಳ ಮಾಡಿ ಜನರ ಜೆಬಿಗೆ ಕತ್ತರಿ ಹಾಕಿತ್ತು. ಇದೀಗ ಹಾಲಿನ ದರ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.