ಮನೆ Uncategorized ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ಹೊಸದಾಗಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ಹೊಸದಾಗಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

0

ಕೋಲ್ಕತ್ತಾ: ಇಲ್ಲಿನ ಆರ್‌ಜಿ ಕರ್ ಆಸ್ಪತ್ರೆಯಲ್ಲಿನ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೊಸದಾಗಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೊಸದಾಗಿ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಅರ್ಜಿದಾರರು (ಸಂತ್ರಸ್ತರ ಪೋಷಕರು) ಕಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿಯನ್ನು ಮುಂದುವರಿಸಬಹುದು ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠ ಗಮನಿಸಿದೆ. ಹಿರಿಯ ವಕೀಲೆ ಕರುಣಾ ನುಂಡಿ ಸಂತ್ರಸ್ತೆಯ ಪೋಷಕರ ಪರವಾಗಿ ವಾದ ಮಂಡಿಸಿದರು. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಿಬಿಐ ಪರವಾಗಿ ಪ್ರತಿನಿಧಿಸಿದರು.