ಚಂಡೀಗಢ: ಹರಿಯಾಣದ ಕರ್ನಲ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಅಕ್ಕಿ ಗಿರಣಿ ಕಟ್ಟಡದ ಒಂದು ಭಾಗವು ಕುಸಿದು ಬಿದ್ದಿದ್ದು ನಾಲ್ವರು ಕಾರ್ಮಿಕರು ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ.
ಮೂರು ಮಹಡಿಯ ಕಟ್ಟಡ ಕುಸಿದ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಜನರು ನಿದ್ರಿಸುತ್ತಿದ್ದರು ಎಂದು ಸ್ಥಳದಲ್ಲಿದ್ದ ಕೆಲವು ಕಾರ್ಮಿಕರು ಹೇಳಿದ್ದಾರೆ.
ನಾಲ್ಕು ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತರೌರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Saval TV on YouTube