ಮನೆ ಅಪರಾಧ ಬೈಕ್‌ ನಿಂದ ಬಿದ್ದು ಹಿಂಬದಿ ಸವಾರ ಸಾವು

ಬೈಕ್‌ ನಿಂದ ಬಿದ್ದು ಹಿಂಬದಿ ಸವಾರ ಸಾವು

0

ಹುಣಸೂರು: ಬೈಕ್‌ ಪಂಚರ್‌ ಆಗಿ ಹಿಂಬದಿ ಸವಾರ ಆಯತಪ್ಪಿ ಕೆಳಗೆ ಬಿದ್ದು, ತೀವ್ರಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಂಚ್ಯಬಳಿಯಲ್ಲಿ ನಡೆದಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಾಲೂಕಿನ ತಿಪ್ಪಲಾಪುರ ನಿವಾಸಿ ಯೋಗೀಶ್‌(29) ಮೃತರು.

Join Our Whatsapp Group

ಕೆಲಸದ ನಿಮಿತ್ತ ಸ್ನೇಹಿತನೊಂದಿಗೆ ಬೈಕಿನಲ್ಲಿ ಹೋಗಿದ್ದ ಯೋಗೀಶ್‌ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಬೈಕ್‌ನ ಟಯರ್‌ ಪಂಚರ್‌ ಆಗಿ ಚಾಲಕನ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ, ತೀವ್ರಗಾಯಗೊಂಡಿದ್ದ ಹಿಂಬದಿಯ ಸವಾರ ಯೋಗೀಶನನ್ನು ಹುಣಸೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮತ್ತೋರ್ವ ಸಣ್ಣಪುಟ್ಟಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.