ಮನೆ ಅಪರಾಧ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ: ಓರ್ವನ ಕೊಲೆ

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ: ಓರ್ವನ ಕೊಲೆ

0

ಬೀದರ್​: ಬಸವಕಲ್ಯಾಣದ ತ್ರಿಪುರಾಂತ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

ತ್ರಿಪುರಾಂತ ನಿವಾಸಿ ಆನಂದ ಫುಲೆ (26) ಮೃತ ಯುವಕ.

ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಆನಂದ ಮತ್ತು ದಿಗಂಬರ ದಾಸೂರೆ ಸೇರಿ ಕೆಲ ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಆನಂದ ಮೇಲೆ ಎದುರಾಳಿ ಗುಂಪಿನ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆನಂದ ಫುಲೆಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಮ್ಮರಗಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಪ್ರಕರಣದಲ್ಲಿ ಗಾಯಗೊಂಡ ದಿಗಂಬರ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ತಿಳಿದ ಹುಮನಾಬಾದ ಎಎಸ್’​ಪಿ ಶಿವಾಂಶು ರಾಜಪುತ್, ಸಿಪಿಐ ಸುಶೀಲಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.