ರಾಮನಗರ: ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ ಬಳಿ ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್ ಮನಲ್ಲಿ ಕೆಲಸ ಮಾಡ್ತಿದ್ದ ಪವನ್ ಕುಮಾರ್(26) ಹತ್ಯೆ ಮಾಡಿದ್ದಾರೆ.
ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್ ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.
Saval TV on YouTube