ಬೆಂಗಳೂರು : ಬೆಂಗಳೂರು ರೋಡ್ ರೇಜ್ ಕೇಸ್’ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕರ ಮೇಲೆಮೇ ಏರ್ ಫೋರ್ಸ್ ಅಧಿಕಾರಿ ಹಲ್ಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ಯುವಕರ ಮೇಲೇನೆ ಹಲ್ಲೆ ಮಾಡಿದ್ದಾರೆ ಎಂಬ ಸತ್ಯ ಸಿಸಿಟಿವಿಯಿಂದ ಬಯಲಾಗಿದ್ದು, ಇದೀಗ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಗಲಾಟೆ ವೇಳೆ ಯೋಧನೇ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಗಲಾಟೆ ವೇಳೆ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರು ಬಿಡದೆ ಬೋಸ್ ಯುವಕರ ಮೇಲೆ ಹಲ್ಲೆ ಮಾಡಿದ್ದಾನೆ. ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ನಡೆಸಿದ. ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವಕನ ಮೇಲೆ ಹಲ್ಲೆ ನಡೆಸಿ ವಿಂಗಕಮಾಂಡರ್ ಬೋಸ್ ಸುಳ್ಳು ಹೇಳಿದ್ದಾನೆ. ಭಾಷೆ ವಿಚಾರಕ್ಕೆ ಈ ಒಂದು ಗಲಾಟೆ ನಡೆದಿದೆ ಎಂದು ವಿಡಿಯೋದಲ್ಲಿ ಹೇಳಿದ್ದ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಕೂಡ ಇಬ್ಬರನ್ನು ಅರೆಸ್ಟ್ ಮಾಡಿದ್ದರು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ವಿರುದ್ಧವೇ ಎಫ್ ಐಆರ್ ದಾಖಲಾಗಿದೆ.w57