ಮನೆ ಕಾನೂನು ರೋಡ್‌ ರೇಜ್‌ ಪ್ರಕರಣ: ನವಜೋತ್‌ ಸಿಂಗ್‌ ಸಿಧು ಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ...

ರೋಡ್‌ ರೇಜ್‌ ಪ್ರಕರಣ: ನವಜೋತ್‌ ಸಿಂಗ್‌ ಸಿಧು ಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್‌

0

ನವದೆಹಲಿ (New Delhi)-1988 ರ ರೋಡ್ ರೇಜ್ ಪ್ರಕರಣಕ್ಕೆ (ರಸ್ತೆ ಜಗಳ ಪ್ರಕರಣ) ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ  ಬಳಿಕ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು (Navjot Singh Sidhu) ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ಅವರನ್ನು ಆರೋಪಮುಕ್ತಗೊಳಿಸಿದ್ದ ಮೇ 2018ರ ಆದೇಶವನ್ನು ಮರುಪರಿಶೀಲಿಸಿ ಎಂದು ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಎಸ್.ಕೆ.ಕೌಲ್ ಅವರ ಪೀಠ ಹೇಳಿದೆ.

ಈ ಹಿಂದೆ ಸಿಧುಗೆ 1 ಸಾವಿರ ರೂಪಾಯಿ ದಂಡ ವಿಧಿಸಿ ಆರೋಪಮುಕ್ತಗೊಳಿಸಲಾಗಿತ್ತು. ಆದರೆ 65 ವರ್ಷದ ಸಂತ್ರಸ್ತೆಯ ಕುಟುಂಬ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈಗ ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಸಿಧುಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ತೀರ್ಪುನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಆದರೆ ಹಿರಿಯ ನಾಗಕರಿಕರಿಗೆ ನೋವುಂಟು ಮಾಡಿದ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸದೆ 1 ಸಾವಿರ ರೂಪಾಯಿ ದಂಡ ವಿಧಿಸಿತ್ತು.

ಸಿಧು 1988ರಲ್ಲಿ ರಸ್ತೆಯಲ್ಲಿ ದಾಂಧಲೆ ನಡೆಸಿ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಬಳಿಕ ಈ ಪ್ರಕಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಸುಪ್ರೀಂ ಕೋರ್ಟ್‌ ನಿಂದ ಆದೇಶ ಹೊರಬೀಳುತ್ತಿದ್ದಂತೆ ಟ್ವೀಟ್‌ ಮಾಡಿರುವ ಸಿಧು, ನಾನು ಕಾನೂನಿಗೆ ತಲೆಬಾಗುತ್ತೇನೆ ಎಂದಿದ್ದಾರೆ.

ಏನಿದು ಪ್ರಕರಣ?

ಡಿಸೆಂಬರ್‌ 27, 1988 ರಂದು ಸಿಧು ಪಟಿಯಾಲ ನಿವಾಸಿ ಗುರ್ನಾಮ್‌ ಸಿಂಗ್‌ ಅವರೊಂದಿಗೆ ಪಾರ್ಕಿಂಗ್‌ ಸ್ಥಳದ ಬಗ್ಗೆ ಜಗಳವಾಡಿದ್ದರು. ಸಿಧು ಮತ್ತು ಅವರ ಸಹವರ್ತಿ ರೂಪಿಂದರ್‌ ಸಿಂಗ್‌ ಸಂಧು ಅವರು ಗುರ್ನಾಮ್‌ ಸಿಂಗ್‌ ಅವರನ್ನು ಅವರ ಕಾರಿನಿಂದ ಎಳೆದುಕೊಂಡು ಹೊಡೆದಿದ್ದು, ಗುರ್ನಾಮ್‌ ಸಾವಿಗೀಡಾಗಿದ್ದರು. 1999ರಲ್ಲಿ ಪಟಿಯಾಲದ ಸೆಷನ್ಸ್‌ ನ್ಯಾಯಾಲವು ಸಿಧು ಮತ್ತು ಅವರ ಸಹಚರರನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಖುಲಾಸಿ ಮಾಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌ 2006 ರಲ್ಲಿ ಸಿಧುವನ್ನು ತಪ್ಪಿತಸ್ಥ ನರಹತ್ಯೆಯ ಅಪರಾಧಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

2018ರಲ್ಲಿ ಸಿಧು ಸುಪ್ರೀಂ ಕೋರ್ಟ್‌ ಗೆ ಮೊರೆ ಹೋದರು. ಒಂದೇ ಏಟಿಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್‌ ಆದೇಶವನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್‌ ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸದೆ 1 ಸಾವಿರ ರೂಪಾಯಿ ದಂಡ ವಿಧಿಸಿತ್ತು.

ಸಿಧು ಅವರ ಸಹಾಯಕ ರೂಪಿಂದರ್‌ ಸಂಧು ಅವರು ಸ್ಥಳದಲ್ಲಿ ಹಾಜರಿದ್ದಕ್ಕೆ ಸರಿಯಾದ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟ್‌ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತ್ತು.