ಮನೆ ಸುದ್ದಿ ಜಾಲ ರಸ್ತೆಗಳು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಿರಬೇಕು: ಡಾ. ಕೆ ವಿ ರಾಜೇಂದ್ರ

ರಸ್ತೆಗಳು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಿರಬೇಕು: ಡಾ. ಕೆ ವಿ ರಾಜೇಂದ್ರ

0

 ಮೈಸೂರು: ರಸ್ತೆಗಳು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಿರಬೇಕು. ಇದರಿಂದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ತಿಳಿಸಿದರು.

Join Our Whatsapp Group

 ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಒಂದು ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ಸಂದರ್ಭದಲ್ಲಿ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿರಬೇಕು. ಸಿಗ್ನಲ್ ಲೈಟ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಪ್ರಯಾಣಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದರು.

 ಪ್ರತಿಯೊಂದು ಜೀವವೂ ಅಮೂಲ್ಯ ವಾದದ್ದು, ಅಪಘಾತಗಳು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ. ಅಗತ್ಯ ಇರುವೆಡೆ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಿ. ಪೀಪಲ್ಸ್ ಪಾರ್ಕ್ ಸೇರಿದಂತೆ ಅಗತ್ಯ ಇರುವೆಡೆ ಹೈ-ಮಾಸ್ಕ್ ಲೈಟ್‌ಗಳನ್ನು ಅಳವಡಿಸುವಂತೆ ಹಾಗೂ ರಸ್ತೆಗಳಲ್ಲಿ ಹಂಪ್ಸ್ಗಳನ್ನು ಸರಿಯಾಗಿ ನಿರ್ವಹಿಸಿ ಎಂದು ನ್ಯಾಷನಲ್ ಹೈವೇ ಅಥಾರಿಟಿ ಅಧಿಕಾರಿಗಳಿಗೆ ಸೂಚಿಸಿದರು.

 ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಅಪಘಾತಗಳಿಂದ 47 ಜನ ಮರಣ ಹೊಂದಿದ್ದಾರೆ. ಏಪ್ರಿಲ್ ತಿಂಗಳಲ್ಲಿ 37 ಅಪಘಾತಗಳು ಹಾಗು ನಗರ ವ್ಯಾಪ್ತಿಯಲ್ಲಿ 11 ಮಾರಣಾಂತಿಕ ಅಪಘಾತಗಳ ಸಂಭವಿಸಿದ್ದು, 50 ಜನ ಸಾವನ್ನಪ್ಪಿದ್ದಾರೆ. ಆದ್ದರಿಂದ ಪ್ರಯಾಣಿಕರು ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ದ್ವಿ ಚಕ್ರ ವಾಹನ ಚಾಲಕರು ಹೆಲ್ಮೆಟ್ ಧರಿಸಿ, ಇತರೆ ವಾಹನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಂಡು ವಾಹನ ಚಲಾಯಿಸುವಂತೆ ವಾಹನ ಸವಾರರಿಗೆ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಿ ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.

 ಸಭೆಯಲ್ಲಿ ಉಪ ಪೊಲೀಸ್ ಆಯುಕ್ತರಾದ ಜಾಹ್ನವಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥತರಿದ್ದರು.

ಹಿಂದಿನ ಲೇಖನನಗರದಲ್ಲಿ 2 ದಿನಗಳ ಮಾವು-ಮೇಳ ಆರಂಭ
ಮುಂದಿನ ಲೇಖನಎಂಥಾ ವೈರಾಗ್ಯ ಹನುಮಂತ