ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್’ನಲ್ಲಿ 500 ಸಿಕ್ಸರ್ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
ಇದರೊಂದಿಗೆ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಖ್ಯಾತಿ ಗಳಿಸಿದ್ದಾರೆ.
ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 553 ಸಿಕ್ಸರ್ಗಳನ್ನು ಸಿಡಿಸಿದ್ದಾರೆ.
ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ 476 ಸಿಕ್ಸರ್, ನ್ಯೂಜಿಲೆಂಡ್ ಮಾಜಿ ನಾಯಕ ಬ್ರೆಂಡನ್ ಮೆಕಲಮ್ 398 ಸಿಕ್ಸರ್ ಮತ್ತು ನ್ಯೂಜಿಲೆಂಡ್ ಆರಂಭಿಕ ಮಾರ್ಟಿನ್ ಗಪ್ಟಿಲ್ 383 ಸಿಕ್ಸರ್ ಸಿಡಿಸಿದ್ದಾರೆ.
ಮೀರಪುರ್ನಲ್ಲಿ ಬುಧವಾರ ನಡೆದ ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್, ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದಾರೆ.
ಕೈಬೆರಳಿನ ಗಾಯದ ನೋವಿನಲ್ಲೂ ಅಬ್ಬರಿಸಿದ ರೋಹಿತ್ ಶರ್ಮಾ, 28 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಐದು ಸಿಕ್ಸರ್ಗಳೊಂದಿಗೆ 51 ರನ್ ಗಳಿಸಿ ಅಜೇಯರಾಗಿ ಉಳಿದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 271 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಭಾರತ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿ 5 ಬಾಂಗ್ಲಾ 5 ರನ್ಗಳ ಅಂತರದಿಂದ ಸೋಲು ಕಂಡಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಬಾಂಗ್ಲಾ 2–0ಯಿಂದ ಕೈವಶ ಮಾಡಿಕೊಂಡಿತು.