ಮನೆ ಕ್ರೀಡೆ ಐಪಿಎಲ್​’ನಲ್ಲಿ ಅನಗತ್ಯ ದಾಖಲೆ ಬರೆದ ರೋಹಿತ್ ಶರ್ಮಾ

ಐಪಿಎಲ್​’ನಲ್ಲಿ ಅನಗತ್ಯ ದಾಖಲೆ ಬರೆದ ರೋಹಿತ್ ಶರ್ಮಾ

0

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್’​ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಪರ ಈ ಬಾರಿ ಕ್ಯಾಮರೋನ್ ಗ್ರೀನ್ ಹಾಗೂ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಿದ್ದರು.

Join Our Whatsapp Group

ಆದರೆ ಗ್ರೀನ್ 6 ರನ್​ಗಳಿಸಿ ತುಷಾರ್ ದೇಶಪಾಂಡೆ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಹಿಟ್​ಮ್ಯಾನ್ 3 ಎಸೆತಗಳನ್ನು ಎದುರಿಸಿ ದೀಪಕ್ ಚಹರ್’​ಗೆ ವಿಕೆಟ್ ಒಪ್ಪಿಸಿದರು. ಆದರೆ ಇದರ ನಡುವೆ ಯಾವುದೇ ರನ್​ಗಳಿಸಿಲ್ಲ ಎಂಬುದು ವಿಶೇಷ.

ಈ ಶೂನ್ಯದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಆಟಗಾರ ಎಂಬ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು.

ದಿನೇಶ್ ಕಾರ್ತಿಕ್ 217 ಇನಿಂಗ್ಸ್​ಗಳಲ್ಲಿ ಒಟ್ಟು 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದೀಗ ಈ ದಾಖಲೆಯನ್ನು ಹಿಟ್​ಮ್ಯಾನ್ ಮುರಿದಿರುವುದು ವಿಶೇಷ.

ರೋಹಿತ್ ಶರ್ಮಾ 232 ಇನಿಂಗ್ಸ್​ಗಳಲ್ಲಿ ಒಟ್ಟು 16 ಬಾರಿ ಯಾವುದೇ ರನ್​ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ.

1- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 232 ಇನಿಂಗ್ಸ್​ಗಳಲ್ಲಿ ಒಟ್ಟು 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

2- ದಿನೇಶ್ ಕಾರ್ತಿಕ್: 217 ಐಪಿಎಲ್​ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 15 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದರು.2- ದಿನೇಶ್ ಕಾರ್ತಿಕ್: 217 ಐಪಿಎಲ್​ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 15 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದರು.

3- ಸುನಿಲ್ ನರೈನ್: ಕೆಕೆಆರ್ ತಂಡದ ಆಟಗಾರ ಸುನಿಲ್ ನರೈನ್ 94 ಇನಿಂಗ್ಸ್​ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

4- ಮಂದೀಪ್ ಸಿಂಗ್: ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ 98 ಇನಿಂಗ್ಸ್​ಗಳಲ್ಲಿ ಒಟ್ಟು 15 ಬಾರಿ ಯಾವುದೇ ರನ್​ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ.

5- ಅಂಬಾಟಿ ರಾಯುಡು: ಸಿಎಸ್​ಕೆ ತಂಡದ ಬ್ಯಾಟರ್ ಅಂಬಾಟಿ ರಾಯುಡು 182 ಇನಿಂಗ್ಸ್​ಗಳಲ್ಲಿ ಒಟ್ಟು 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.