ಮನೆ ಕಾನೂನು ವರ್ತಿಕಾ ವರ್ಗಾವಣೆ ಬೆನ್ನಲ್ಲೇ ರೂಪಾ ಮೌದ್ಗಿಲ್ ಎತ್ತಂಗಡಿ

ವರ್ತಿಕಾ ವರ್ಗಾವಣೆ ಬೆನ್ನಲ್ಲೇ ರೂಪಾ ಮೌದ್ಗಿಲ್ ಎತ್ತಂಗಡಿ

0

ಬೆಂಗಳೂರು: ಐಪಿಎಸ್ ಅಧಿಕಾರಿಗಳಾದ​ ಡಿ ರೂಪಾ ಮೌದ್ಗಿಲ್​  ಹಾಗೂ ​ ವರ್ತಿಕಾ ಕಟಿಯರ್  ನಡುವಿನ ಗುದ್ದಾಟ ಶುರುವಾಗಿದ್ದು, ಈ ಇಬ್ಬರ ಗಲಾಟೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕಚೇರಿವರೆಗೂ ಹೋಗಿ ತಲುಪಿದೆ. ಇದರ ಬೆನ್ನಲ್ಲೇ ಇದೀಗ ಡಿ ರೂಪಾ ಮೌದ್ಗಿಲ್ ಹಾಗೂ ವರ್ತಿಕಾ ಕಟಿಯರ್ ಇಬ್ಬರನ್ನೂ ಸಹ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ.

Join Our Whatsapp Group

ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿದ್ದರೆ, ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದ ರೂಪಾ ಅವರನ್ನು ಇಂದು (ಮಾರ್ಚ್​ 05) ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಎಂಡಿ ಆಗಿ ವರ್ಗಾವಣೆ ಮಾಡಲಾಗಿದೆ.

ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ದಾಖಲೆ ಕಳುವು ಮಾಡಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಡಿಐಜಿ ವರ್ತಿಕಾ ಕಟಿಯಾರ್ ಅವರು ರೂಪ ಮೌದ್ಗಿಲ್ ವಿರುದ್ದ ಆರೋಪಿಸಿದ್ದು, ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಮೊನ್ನೆ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿತ್ತು. ಇದರ ಬೆನ್ನಲ್ಲೇ ದೂರು ನೀಡಿದವರನ್ನೇ ವರ್ಗಾವಣೆ ಮಾಡಲಾಗಿದೆ ಎನ್ನುವ ಚರ್ಚೆಗಳು ಶುರುವಾಗಿದ್ದವು. ಇದೀಗ ರೂಪ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದೆ.