ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ನಗರದ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಶನಿವಾರ(ನ.30) ನಡೆದಿದೆ.
ರಾಜೇಶ್ ಶೆಟ್ಟಿ (38 ) ಹತ್ಯೆಯಾದ ರೌಡಿಶೀಟರ್.
ಹಾಡಹಗಲೇ ಐವರು ದುಷ್ಕರ್ಮಿಗಳ ತಂಡ ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ವಿನೋಬ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.