ಬೆಂಗಳೂರು: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಗ್ಯಾಂಗ್ ಹಿಂದೆ ಬಿದ್ದಿದ್ದ ಪೊಲೀಸರು, ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ ಮೇಲೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮಾಯಸಂದ್ರ ಬಳಿ ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್ ಅವರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ರೌಡಿಶೀಟರ್ ಮನೋಜ್ ಮೇಲೆ ಲೋಕಿ ಅಂಡ್ ಗ್ಯಾಂಗ್ ಅಟ್ಯಾಕ್ ಮಾಡಿತ್ತು. ಈ ಘಟನೆ ಬಳಿಕ ಗ್ಯಾಂಗ್ನ ಸದಸ್ಯರೆಲ್ಲ ತಲೆಮರೆಸಿಕೊಂಡಿದ್ದರು. ಬಂಧನ ಮಾಡಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ಪೊಲೀಸ್ ಸಿಬ್ಬಂದಿ ಚನ್ನ ಬಸವ ನಾಯಕ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಜಿಗಣಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ. ಸಧ್ಯ ಆರೋಪಿ ಲೋಕಿಯನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.