ಮನೆ ಉದ್ಯೋಗ RRB ನೇಮಕಾತಿ: 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

RRB ನೇಮಕಾತಿ: 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹಿಂದೆ 9144 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಪರಿಷ್ಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಬೆಂಗಳೂರು ವಲಯಕ್ಕೆ 337 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

Join Our Whatsapp Group

ಹುದ್ದೆ ವಿವರ:

ಟೆಕ್ನಿಶಿಯನ್​ ಗ್ರೇಡ್​ 1 ಸಿಗ್ನಲ್​ (ಓಪನ್​ ಲೈನ್​) – 1092

ಟೆಕ್ನಿಶಿಯನ್​ ಗ್ರೇಡ್​ 3 (ಓಪನ್​ ಲೈನ್​) -8052

ಟೆಕ್ನಿಶಿಯನ್​ ಗ್ರೇಡ್​​ 3 (ವರ್ಕ್​ಶಾಪ್ ಮತ್ತು ಪಿಯು) – 5154

ವಿದ್ಯಾರ್ಹತೆ: ಟೆಕ್ನಿಶಿಯನ್​ ಗ್ರೇ 1 ಸಿಗ್ನಲ್​ ಹುದ್ದೆಗೆ ಅಭ್ಯರ್ಥಿಗಳು ಡಿಪ್ಲೊಮಾ, ಬಿಎಸ್ಸಿ, ಬಿಇ, ಬಿಟೆಕ್​​, ಟೆಕ್ನಿಶಿಯನ್​ 3 ಹುದ್ದೆಗೆ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 36 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳು 3 ವರ್ಷ ಮತ್ತು ಪ.ಜಾ ಹಾಗೂ ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಮಹಿಳಾ, ವಿಕಲಚೇತನ ಅಭ್ಯರ್ಥಿಗಳಿಗೆ 250 ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಇದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.

ಈ ಹುದ್ದೆಗೆ ಆಗಸ್ಟ್​ 22ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 6 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು indianrailways.gov.in ಭೇಟಿ ನೀಡಬಹುದಾಗಿದೆ.

HAL ನಲ್ಲಿ166 ಟೆಕ್ನಿಶಿಯನ್​ ಹುದ್ದೆ: ಬೆಂಗಳೂರಿನ ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್​ನಲ್ಲಿ 166 ಟೆಕ್ನಿಶಿಯನ್​ ಹುದ್ದೆಗಳ ಅಧಿಸೂಚನೆ ಪ್ರಕಟಿಸಲಾಗಿದೆ. ಡಿಪ್ಲೊಮಾ ಟೆಕ್ನಿಶಿಯನ್​ 43, ಟೆಕ್ನಿಶಿಯನ್​ 123 ಹುದ್ದೆಗಳಿವೆ. ಡಿಪ್ಲೊಮಾ ಟೆಕ್ನಿಶಿಯನ್​ ಹುದ್ದೆಗೆ ಡಿಪ್ಲೊಮಾ ಮತ್ತು ಟೆಕ್ನಿಶಿಯನ್​ ಹುದ್ದೆಗೆ ಐಟಿಐ ಶಿಕ್ಷಣ ಹೊಂದಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 28 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಡಿಪ್ಲೊಮಾ ಟೆಕ್ನಿಶಿಯನ್​ ಹುದ್ದೆಗೆ 46,764 ರೂ ಮತ್ತು ಟೆಕ್ನಿಶಿಯನ್​ ಹುದ್ದೆಗೆ 44,796 ರೂ. ಮಾಸಿಕ ವೇತನವಿದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಗಸ್ಟ್​ 14ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಆಗಸ್ಟ್​ 28.

ಈ ಕುರಿತ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು hal-india.co.in ಭೇಟಿ ನೀಡಬಹುದು.