ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2 ಪೋಸ್ಟ್ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ತಮ್ಮ ರೆಸ್ಯೂಮ್’ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 15/12/2022
ಇ-ಮೇಲ್ ಕಳುಹಿಸಲು ಕೊನೆಯ ದಿನ: 15/01/2023
ವಿದ್ಯಾರ್ಹತೆ:
ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಫಿಜಿಕಲ್ ಸೈನ್ಸಸ್, ಆಪ್ಟಿಕಲ್ ಎಂಜಿನಿಯರಿಂಗ್’ನಲ್ಲಿ ಡಾಕ್ಟರಲ್ ಡಿಗ್ರಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 15, 2023ಕ್ಕೆ ಗರಿಷ್ಠ 36 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 47,000-54,000 ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್ನೊಂದಿಗೆ ಇ-ಮೇಲ್ ಐಡಿ quic-job@rri.res.in ಗೆ ಜನವರಿ 15, 2023ರೊಳಗೆ ಕಳುಹಿಸಬೇಕು.
ಉದ್ಯೋಗದ ಸ್ಥಳ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.