ಮನೆ ಉದ್ಯೋಗ ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

0

ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 2 ಪೋಸ್ಟ್ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ತಮ್ಮ ರೆಸ್ಯೂಮ್’ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 15/12/2022

ಇ-ಮೇಲ್ ಕಳುಹಿಸಲು ಕೊನೆಯ ದಿನ: 15/01/2023

ವಿದ್ಯಾರ್ಹತೆ:

ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಫಿಜಿಕಲ್ ಸೈನ್ಸಸ್, ಆಪ್ಟಿಕಲ್ ಎಂಜಿನಿಯರಿಂಗ್’ನಲ್ಲಿ ಡಾಕ್ಟರಲ್ ಡಿಗ್ರಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 15, 2023ಕ್ಕೆ ಗರಿಷ್ಠ 36 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 47,000-54,000 ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್ನೊಂದಿಗೆ ಇ-ಮೇಲ್ ಐಡಿ [email protected] ಗೆ ಜನವರಿ 15, 2023ರೊಳಗೆ ಕಳುಹಿಸಬೇಕು.

ಉದ್ಯೋಗದ ಸ್ಥಳ:

ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಹಿಂದಿನ ಲೇಖನಕಾಬೂಲ್ ಕಡ್ಲೆ ಬಳಸಿ ಮಾಡುವ ಚೋಲೆ ಚಾಟ್ಸ್ ರೆಸಿಪಿ
ಮುಂದಿನ ಲೇಖನಪಿರಿಯಾಪಟ್ಟಣದ ಚರ್ಚ್ ಮೇಲೆ ಕಿಡಿಗೇಡಿಗಳ ದಾಳಿ: ಪೀಠೋಪಕರಣ ಧ್ವಂಸ