ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ.
ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಎರಡು ತಿಂಗಳಿನ ಈ 21 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ.
ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.














