ಮನೆ ಅಂತಾರಾಷ್ಟ್ರೀಯ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

0

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಇಂದಿನ (ಸೋಮವಾರ) ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದೆ.

Join Our Whatsapp Group

ರೂಪಾಯಿ ಮೌಲ್ಯ 23 ಪೈಸೆ ಇಳಿಕೆಯಾಗಿದ್ದು, ಪ್ರತೀ ಡಾಲರ್‌ ಮೌಲ್ಯವು ಮೊದಲ ಬಾರಿಗೆ ₹86.27ಕ್ಕೆ ಮುಟ್ಟಿದೆ.

ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವು ಮುಂದುವರಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದೆ. ಅಮೆರಿಕದ ಬಾಂಡ್‌ಗಳ ಗಳಿಕೆಯಲ್ಲಿ ಹೆಚ್ಚಳವಾಗಿದೆ. ದೇಶೀಯ ಸೂಚ್ಯಂಕಗಳ ಇಳಿಕೆಯಿಂದಾಗಿ ರೂಪಾಯಿ ಮೇಲೆ ಒತ್ತಡ ಸೃಷ್ಟಿಯಾಗಿದೆ. ಇದರಿಂದ ರೂಪಾಯಿ ಮೌಲ್ಯ ಕುಸಿತದ ಹಾದಿ ಹಿಡಿದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.