ಮನೆ ಸುದ್ದಿ ಜಾಲ ರಷ್ಯಾ-ಉಕ್ರೇನ್ ಬಿಕ್ಕಟ್ಟು: ರಷ್ಯಾ ದಾಳಿಗೆ 9 ಬಲಿ, 8 ಮಂದಿಗೆ ಗಾಯ

ರಷ್ಯಾ-ಉಕ್ರೇನ್ ಬಿಕ್ಕಟ್ಟು: ರಷ್ಯಾ ದಾಳಿಗೆ 9 ಬಲಿ, 8 ಮಂದಿಗೆ ಗಾಯ

0

ಕಿವ್ (ಉಕ್ರೇನ್): ರಷ್ಯಾ ಮಿಲಿಟರಿ ಪಡೆಗಳು ನಡೆಸಿದ ಶೆಲ್‌ ದಾಳಿಯಿಂದಾಗಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 9 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಆಂತರಿಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಮೇಲೆ ಸೇನಾ ಕಾರ್ಯಾಚರಣೆಯನ್ನು ಗುರುವಾರ ಘೋಷಿಸಿರುವ ಹಿನ್ನೆಲೆಯಲ್ಲಿ  ರಷ್ಯಾ ಸೇನೆಯ ಭೂ ಮತ್ತು ವಾಯುಪಡೆಗಳು, ಉಕ್ರೇನ್‌ ಮೇಲೆ ಆಕ್ರಮಣ ಆರಂಭಿಸಿವೆ.

ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳು ಉಕ್ರೇನ್ ಗಡಿ ದಾಟಿ, ಚೆರ್ನಿಹಿವ್, ಖರ್ಕೈವ್ ಮತ್ತು ಲುಹಾನ್ಸ್ಕ್‌ ಪ್ರಾಂತ್ಯಕ್ಕೆ ಪ್ರವೇಶಿಸಿವೆ ಎಂದು ಗಡಿ ಭದ್ರತಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.