ಮನೆ ಅಂತಾರಾಷ್ಟ್ರೀಯ ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ಶುಭ ಹಾರೈಕೆ

ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ಶುಭ ಹಾರೈಕೆ

0

ಉಜ್ಬೇಕಿಸ್ತಾನ: 73ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಶುಭಾಶಯ ಕೋರಿದ್ದಾರೆ.

ಉಜ್ಬೇಕಿಸ್ತಾನದ ಸಮರ್ಕಂಡ್ ನಗರದಲ್ಲಿ ಶುಕ್ರವಾರ ನಡೆದ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸಭೆ ನಡೆಸಿದ ವೇಳೆಯಲ್ಲಿ ಪುಟಿನ್‌ ಅವರು ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.

ನಾನು ಭಾರತಕ್ಕೆ ಶುಭ ಹಾರೈಸುತ್ತೇನೆ. ನನ್ನ ಆತ್ಮೀಯ ಗೆಳೆಯ, ನೀವು (ಮೋದಿ) ನಾಳೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದು ನನಗೆ ತಿಳಿದಿದೆ. ರಷ್ಯಾದ ಸಂಪ್ರದಾಯದ ಪ್ರಕಾರ, ನಾವು ಎಂದಿಗೂ ಮುಂಚಿತವಾಗಿ ಅಭಿನಂದನೆಗಳನ್ನು ನೀಡುವುದಿಲ್ಲ. ಹಾಗಾಗಿ ಈಗ ನಾನು ಹಾಗೆ ಮಾಡಲಾರೆ. ಆದರೆ ನಾನು ನಿಮಗೆ ಶುಭ ಹಾರೈಸುತ್ತೇವೆ. ಸೌಹಾರ್ದಯುತ ಭಾರತಕ್ಕಾಗಿ ನಾನು ಶುಭ ಹಾರೈಸುತ್ತೇನೆ… ನಿಮ್ಮ ನಾಯಕತ್ವದಲ್ಲಿ ಭಾರತವು ಸಮೃದ್ಧವಾಗಲೆಂದು ಬಯಸುತ್ತೇನೆ ಎಂದು ಶುಭ ಕೋರಿದ್ದಾರೆ.

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳು ಅತ್ಯಂತ ವೇಗವಾಗಿ ಬೆಳೆಯುತ್ತಿವೆ. ಕಾರ್ಯತಂತ್ರದ ವಿಶೇಷ ಪಾಲುದಾರಿಕೆಯ ಸ್ವರೂಪವನ್ನು ಹೊಂದಿವೆ. ಉಭಯ ದೇಶಗಳು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ ಎಂದು ಪುಟಿನ್ ಪ್ರತಿಪಾದಿಸಿದರು.

ಹಿಂದಿನ ಲೇಖನಹೃದಯ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಲು ಮುರುಘಾ ಶ್ರೀ ಕೋರಿಕೆ: ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಮುಂದಿನ ಲೇಖನನಮೀಬಿಯಾದಿಂದ ಭಾರತಕ್ಕೆ ತರಲಾದ ಚೀತಾಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ