ಹುಬ್ಬಳ್ಳಿ(Hubballi): ಸಿ ಎಂ ಬಸವರಾಜ ಬೊಮ್ಮಾಯಿ ಅವರು ಎಸ್. ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಬಗ್ಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸುವುದರ ಹಿನ್ನೆಲೆ ಸದನದಲ್ಲಿ ಮಂಡಿಸಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಮೀಸಲಾತಿ ಹೆಚ್ಚಳ ಕುರಿತ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಅವರು ಸುಗ್ರೀವಾಜ್ಞೆಯನ್ನು ಉಭಯ ಸದನದಲ್ಲಿ ಮಂಡನೆ ಮಾಡುತ್ತೇವೆ. ವಿಧೇಯಕ ಬಗ್ಗೆ ಸದನದಲ್ಲಿ ಸುದೀರ್ಘವಾಗಿ ಚರ್ಚೆ ಮಾಡಲಾಗುವುದು. ಬಳಿಕ ಸದನದಲ್ಲಿ ಬಿಲ್ ಪಾಸ್ ಮಾಡಲಾಗುವುದು ಎಂದು ತಿಳಿಸಿದರು.
ಪಂಚಮಸಾಲಿ ಸಮುದಾಯದಿಂದ 2ಎ ಮೀಸಲಾತಿಗೆ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಅವರು, ಮೀಸಲಾತಿ ಬಗ್ಗೆ ಬೇರೆ ಬೇರೆ ಆಯೋಗದ ಚರ್ಚೆ ಹಂತದಲ್ಲಿದೆ. ಆಯೋಗದ ವರದಿ ಬಂದ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಮುಸ್ಲಿಮರ ಮೀಸಲಾತಿ ವಾಪಸ್ ಗೆ ಕೆಲ ಶಾಸಕರ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಅವರು, ಮುಸ್ಲಿಮರ ಮೀಸಲಾತಿ ವಾಪಸ್ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಈ ಬಗ್ಗೆ ಶಾಸಕರು ಹೇಳಿದ್ದು ವೈಯಕ್ತಿಕ ಅಭಿಪ್ರಾಯ ಅಷ್ಟೇ. ಮುಸ್ಲಿಂ ಮೀಸಲಾತಿ ಬಗ್ಗೆ ಸಂವಿಧಾನದಡಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.