ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್’ಗಾಗಿ ಮುರುಘಾ ಮಠ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಆಡಳಿತಾಧಿಕಾರಿ ಮತ್ತು ಮಾಜಿ ಶಾಸಕ ಆಗಿರುವ ಎಸ್.ಕೆ ಬಸವರಾಜನ್ ಅವರ ಹೆಸರಿನಲ್ಲಿ ಕಾಂಗ್ರೆಸ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಮುರುಘಾ ಮಠದಲ್ಲಿ ಫೋಟೋಗಳು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್ಕೆ ಬಸವರಾಜನ್ ಬೆಂಬಲಿಗರ ಮೂಲಕ ಕಾಂಗ್ರೆಸ್ ಟಿಕೆಟ್‍ಗೆ ಅರ್ಜಿಯನ್ನು ಕೆಪಿಸಿಸಿ ಕಚೇರಿಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆ 2 ಲಕ್ಷ ರೂಪಾಯಿ ಬಿಲ್ಡಿಂಗ್ ಫಂಡ್ ನೀಡಿ ಟಿಕೆಟ್‍ಗೆ ಅರ್ಜಿ ಹಾಕಿದ್ದಾರೆ.
2008ರಲ್ಲಿ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ಕೆ ಬಸವರಾಜನ್ ಬಳಿಕ 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಮಾಜಿ ಎಂಎಲ್ಸಿ ರಘು ಆಚಾರ್, ಹನುಮನುಲಿ ಷಣ್ಮುಗಪ್ಪ, ಜಿ. ಜಯರಾಮಯ್ಯ, ಉದ್ಯಮಿ ಕೆಸಿ ವೀರೇಂದ್ರ ಪಪ್ಪಿ, ಮಾಜಿ ಶಾಸಕ ಎವಿ ಉಮಾಪತಿ, ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸೇರಿದಂತೆ ಐದಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಕ್ಷೇತ್ರದಿಂದ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.