ಮನೆ ರಾಜ್ಯ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

0

ತಿರುವನಂತಪುರಂ : ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ಬಂಧಿಸಿದೆ. ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ಅಲ್ಲಿಂದ ತಿರುವನಂತಪುರದ ಅಪರಾಧ ಶಾಖೆಯ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆಯನ್ನು ನಡೆಸಿದ್ದಾರೆ.

ಉನ್ನಿಕೃಷ್ಣನ್ ಪೊಟ್ಟಿ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ವಿಚಾರಣೆ ನಂತರ ಅವರನ್ನು ಇಂದು ಪತ್ತನಂತಿಟ್ಟದ ರನ್ನಿಯಲ್ಲಿರುವ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಈ ವೇಳೆ ಕೋರ್ಟ್​ ಮುಂದೆ ಎಸ್​​​ಐಟಿ ಅಧಿಕಾರಿಗಳು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಕೇಳುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಎಸ್​​ಐಟಿ ತಂಡದ ರಚನೆ ಮಾಡಲಾಗಿದೆ.