Saval TV on YouTube
ತೇಣಿ: ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಕಮರಿಗೆ ಉರುಳಿ, 8 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತೇಣಿ ಜಿಲ್ಲಾಧಿಕಾರಿ ಕೆ ವಿ ಮುರಳೀಧರನ್ ತಿಳಿಸಿದ್ದಾರೆ.
ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಘಟನೆಯಲ್ಲಿ ಏಳು ಮಂದಿ ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂಟು ಮಂದಿ ಮೃತರಲ್ಲಿ ಒಬ್ಬ ಬಾಲಕನೂ ಸೇರಿದ್ದು, ಇವರೆಲ್ಲರೂ ತೇಣಿಯ ಆಂಡಿಪಟ್ಟಿ ನಿವಾಸಿಗಳು. ಶಬರಿಮಲೆಗೆ ಯಾತ್ರೆಗೆ ತೆರಳಿದ್ದ ಎಲ್ಲರೂ ಹುಟ್ಟೂರಿಗೆ ಹಿಂತಿರುಗುತ್ತಿದ್ದರು.














