ಮನೆ ಅಪರಾಧ ತಾರಕ್ಕೇಕಿರದ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗ ಕಾಲೇಜಿನಲ್ಲಿ ಕಲ್ಲು ತೂರಾಟ

ತಾರಕ್ಕೇಕಿರದ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗ ಕಾಲೇಜಿನಲ್ಲಿ ಕಲ್ಲು ತೂರಾಟ

0

ಶಿವಮೊಗ್ಗ: ಕೇಸರಿ ಶಾಲು, ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸಮವಸ್ತ್ರ ನೀತಿ ಆದೇಶ ಹೊರಬಿದ್ದಿದ್ದು, ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ವಿಚಾರಣೆ ನಡೆಯಲಿದೆ. ಆದರೆ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾರೂಪ ಪಡೆದುಕೊಳ್ಳುತ್ತಿದೆ.

ಶಿವಮೊಗ್ಗ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ 4-5 ಮಂದಿಗೆ ಗಾಯಗಳಾಗಿವೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಒಂದು ಹೆಜ್ಜೆ ಮುಂದೆ ಹೋಗಿ ಕೇಸರಿ ಧ್ವಜಾರೋಹಣ  ಸಹ ಮಾಡಿದ್ದಾರೆ.

ಕೇಸರಿ ಶಾಲ್ ಧರಿಸಿದ ಓರ್ವ ವಿದ್ಯಾರ್ಥಿ ಕಲ್ಲು ತೂರುತ್ತಿರುವ ದೃಶ್ಯ ಸೆರೆಯಾಗಿದ್ದು, ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಲಕ್ಷ್ಮಿ ಪ್ರಸಾದ್ ಮತ್ತು ಡಿಸಿ ಸೆಲ್ವಮಣಿ ಭೇಟಿ ನೀಡಿದ್ದು, ವಿದ್ಯಾರ್ಥಿಗಳನ್ನು ಕಾಲೇಜು ಆವರಣದಿಂದ ಹೊರ ಕಳುಹಿಸಲಾಗುತ್ತದೆ. ವಿದ್ಯಾರ್ಥಿಗಳು ಒಪ್ಪದಿದ್ದಾಗ ಲಾಠಿ ಸಹ ಬೀಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅನಿರ್ಧಿಷ್ಟವಾಧಿವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಹಿಂದಿನ ಲೇಖನಹಿಜಾಬ್ ವಿವಾದ: ನಾಲ್ಕೂ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್
ಮುಂದಿನ ಲೇಖನಮೈಸೂರಿಗರೇ ಎಚ್ಚರ: ನಗರದಲ್ಲಿ ಹರಿದಾಡುತ್ತಿವೆ 50, 100ರ ನಕಲಿ ನೋಟುಗಳು!